- Advertisement -
![]()
- Advertisement -
ಮೂಡುಬಿದಿರೆ: ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಮುಖಂಡರಿಂದ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಮೂಡುಬಿದಿರೆಯಿಂದ ಪಾದಯಾತ್ರೆ ನಡೆಸಲಾಯಿತು.
ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾಗಿ ರೂಪಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ-ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಮೂಡುಬಿದಿರೆ ಬಸ್ ನಿಲ್ದಾಣದಿಂದ ಪಾದಯಾತ್ರೆ ಆರಂಭವಾಯಿತು.
ಈ ಸಂದರ್ಭದಲ್ಲಿ ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಮುಖಂಡರು ಭಾಗವಹಿಸಿ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಾದಯಾತ್ರೆಯಲ್ಲಿ ಕಾರ್ಮಿಕರು, ಸಂಘಟನಾ ಕಾರ್ಯಕರ್ತರು ಭಾಗವಹಿಸಿದ್ದರು.
- Advertisement -


