- Advertisement -
![]()
- Advertisement -
ಬೆಂಗಳೂರು: ಈ ವರ್ಷದ ಮಂಗಳೂರು ದಸರಾಕ್ಕೆ ವಿಶೇಷ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಮನವಿ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕ ಕಾಮತ್, ಐದು ಕೋಟಿ ರೂಪಾಯಿ ಅನುದಾನ ಮೀಸಲಿಡುವಂತೆ ಮನವಿ ಮಾಡಿದ್ದಾರೆ.
ವಿಶೇಷ ಅನುದಾನ ನಿಗದಿಪಡಿಸಿ 2026-27ನೇ ಸಾಲಿನ ಆಯವ್ಯದಲ್ಲಿ ಘೋಷಣೆ ಮಾಡುವಂತೆಯೂ ವೇದವ್ಯಾಸ ಕಾಮತ್ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಲಿಖಿತ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಶಾಸಕರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಅನುದಾನ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
- Advertisement -


