Sunday, June 7, 2026
Homeತಾಜಾ ಸುದ್ದಿಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ ಮಾಜಿ ಸಚಿವೆ ಜಯಮಾಲಾ ಆಯ್ಕೆ

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ ಮಾಜಿ ಸಚಿವೆ ಜಯಮಾಲಾ ಆಯ್ಕೆ

- Advertisement -
- Advertisement -

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಹಿರಿಯ ಚಲನಚಿತ್ರ ನಟಿ ಮತ್ತು ಮಾಜಿ ಸಚಿವೆ ಜಯಮಾಲಾ ಆಯ್ಕೆಯಾಗಿದ್ದಾರೆ.

ಬೆಂಗಳೂರಿ‌ನ ಶಿವಾನಂದ ಸರ್ಕಲ್ ನಲ್ಲಿರುವ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ನಿರ್ಮಾಪಕ ಭಾ.ಮಾ.‌ ಹರೀಶ್ ಅವರ ವಿರುದ್ಧ ಗೆಲುವು ಸಾಧಿಸಿರುವ ಜಯಮಾಲಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಚಲಾವಣೆಯಾಗಿದ್ದ ಒಟ್ಟು 813 ಮತಗಳ ಪೈಕಿ ಜಯಮಾಲಾ ಅವರು 512 ಮತಗಳನ್ನು‌ ಪಡೆದು ದೊಡ್ಡ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ 2008ರಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿದ್ದ ಜಯಮಾಲಾ ಇದೀಗ ಎರಡನೇ ಬಾರಿಗೆ ಅಧ್ಯಕ್ಷೆಯಾಗುತ್ತಿದ್ದಾರೆ.

ಚಲನಚಿತ್ರ ನಿರ್ಮಾಪಕ ಮತ್ತು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಕೂಡಾ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಾದರೂ ಬಳಿಕ ಹಿಂತೆಗೆದುಕೊಂಡಿದ್ದರು.

- Advertisement -

Latest News

error: Content is protected !!