Wednesday, June 24, 2026
Homeಮನರಂಜನೆಬಾಲಿವುಡ್ ನ ಖ್ಯಾತ ನಿರ್ದೇಶಕ ರೋಹಿತ್‌ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ

ಬಾಲಿವುಡ್ ನ ಖ್ಯಾತ ನಿರ್ದೇಶಕ ರೋಹಿತ್‌ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ

- Advertisement -
- Advertisement -

ಮುಂಬೈ: ಬಾಲಿವುಡ್ ನ ಖ್ಯಾತ ನಿರ್ದೇಶಕ ರೋಹಿತ್‌ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಜುಹುನಲ್ಲಿ ರೋಹಿತ್‌ ಶೆಟ್ಟಿ ನಿವಾಸದ ಮೇಲೆ  ನಿನ್ನೆ ಅಂದರೆ ಜ.31 ರಂದು ರಾತ್ರಿ ದಾಳಿ ನಡೆದಿದೆ.

ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಒಟ್ಟು ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಸ್ಥಳೀಯರು ಹೇಳಿದರು. ಕೃತ್ಯ ಮಾಡಿದವರು ಯಾರು ಎನ್ನುವುದು ಇನ್ನೂ ತಿಳಿದು ಬಂದಿದೆ. ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗುಂಡಿನ ದಾಳಿಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಪೊಲೀಸರು ಎಲ್ಲ ಆಯಾಮದಿಂದ ತನಿಖೆ ಮಾಡುತ್ತಿದ್ದಾರೆ. ರೋಹಿತ್‌ ಶೆಟ್ಟಿ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ. ಪೊಲೀಸರನ್ನು ಸುತ್ತಮುತ್ತಲಿನ ಪ್ರದೇಶದಲ್ಲಿ ನಿಯೋಜನೆ ಮಾಡಲಾಗಿದೆ. ಗುಂಡಿನ ದಾಳಿಯಲ್ಲಿ ವಿದೇಶಿ ಭಯೋತ್ಪಾದಕರ ಕೈವಾಡ ಇದೆಯಾ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ. ಯಾರು ಕೂಡಾ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಘಟನೆ ಸಂಬಂಧ ರೋಹಿತ್‌ ಶೆಟ್ಟಿ ಹಾಗೂ ಕುಟುಂಬದವರು ಯಾವುದೇ ಹೇಳಿಕೆ ನೀಡಿಲ್ಲ.

- Advertisement -

Latest News

error: Content is protected !!