- Advertisement -
![]()
- Advertisement -
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿದ್ದ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.
ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಪಿಣರಾಯ್ ವಿಜಯನ್ ಒತ್ತಾಯ ಮಾಡಿದ್ದಾರೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪಿಣರಾಯಿ ವಿಜಯನ್ ಮೂರು ಪುಟಗಳ ಪತ್ರ ಬರೆದಿದ್ದು, ರಾಯ್ ಆತ್ಮಹತ್ಯೆ ನಡೆದ ವೇಳೆ ಅವರ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದ್ದ ವಿಚಾರವನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಾನ್ಫಿಡೆಂಟ್ ಗ್ರೂಪ್ ಚೇರ್ ಮನ್ ಆಗಿದ್ದ ಸಿ.ಜೆ. ರಾಯ್ ಬೆಂಗಳೂರಿನ ಲಾಂಗ್ ಫೋರ್ಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
- Advertisement -


