- Advertisement -
![]()
- Advertisement -
ಬೆಂಗಳೂರು: ನಾನು ಅಸಹಾಯಕ ಮುಖ್ಯಮಂತ್ರಿ ಅಲ್ಲ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಇಂದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಮೇಲಿನ ಚರ್ಚೆಗೆ ರಾಜ್ಯ ಸರ್ಕಾರದ ಉತ್ತರ ನೀಡಿದ ಸಿಎಂ, ನಮ್ಮ ಸರ್ಕಾರ ಹಾದಿಯನ್ನು ತಪ್ಪಿಲ್ಲ ಹಾಗೂ ನಾನು ಅಸಹಾಯಕ ಮುಖ್ಯಮಂತ್ರಿಯೂ ಅಲ್ಲ ಎಂದು ಹೇಳಿದ್ದಾರೆ.
ಎರಡೂವರೆ ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿರುವ ಸಿದ್ದರಾಮಯ್ಯ ನನ್ನ ಜೀವನದಲ್ಲಿ ಪೋಸ್ಟಿಂಗ್, ನೇಮಕಾತಿ ಮತ್ತು ವರ್ಗಾವಣೆಗೆ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದಿದ್ದ ಚರ್ಚೆಯಲ್ಲಿ ರಾಜ್ಯ ಸರ್ಕಾರ ಹಾದಿ ತಪ್ಪಿದ್ದು, ಸಿದ್ದರಾಮಯ್ಯ ಹುಲಿಯಾ ಬದಲು ಇಲಿಯಾ ಆಗಿದ್ದಾರೆ ಎಂದು ವಿಪಕ್ಷ ಬಿಜೆಪಿ ಶಾಸಕರು ಲೇವಡಿ ಮಾಡಿದ್ದರು.
- Advertisement -


