- Advertisement -
![]()
- Advertisement -
ಶಿವಮೊಗ್ಗ: ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಗರದ ಮಾರಿಕಾಂಬಾ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ಅಸ್ವಸ್ಥಗೊಂಡಿದ್ದ ಕಾಗೋಡು ತಿಮ್ಮಪ್ಪ ಕುಸಿದು ಬಿದ್ದಿದ್ದರು.
ಉಸಿರಾಟದ ತೊಂದರೆ ಹಾಗೂ ಮಧುಮೇಹದ ಸಮಸ್ಯೆಯಿಂದಾಗಿ ಸಮಸ್ಯೆ ಉಂಟಾಗಿದ್ದು, ಕೂಡಲೇ ಅವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾರಿಕಾಂಬಾ ದೇವಸ್ಥಾನದಲ್ಲಿ ಉಂಟಾಗಿದ್ದ ಭಾರಿ ಜನಸಂದಣಿಯಿಂದಾಗಿ ಕಾಗೋಡು ತಿಮ್ಮಪ್ಪ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
- Advertisement -


