- Advertisement -
![]()
- Advertisement -
ಬೆಂಗಳೂರು: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿವೆ.
ಇಂದು ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತಾಗಿ ನಡೆದ ಚರ್ಚೆಗೆ ಸಚಿವ ಆರ್.ಬಿ. ತಿಮ್ಮಾಪುರ ನೀಡಿದ ಉತ್ತರಕ್ಕೆ ತೃಪ್ತವಾಗದ ಬಿಜೆಪಿ ಮತ್ತು ಜೆಡಿಎಸ್ ಅಹೋರಾತ್ರಿ ಧರಣಿಯಲ್ಲಿ ತೊಡಗಿವೆ.
ಸದನ ಮುಂದೂಡಲ್ಪಟ್ಟ ಬಳಿಕ ಎರಡೂ ಪಕ್ಷಗಳ ಶಾಸಕರು ವಿಧಾನಸಭೆಯಲ್ಲೇ ಉಳಿದಿದ್ದು, ರಾತ್ರಿಯ ಭೋಜನ ಮತ್ತು ಮಲಗಲು ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಕಲಾಪವನ್ನು ನಾಳೆ ಬೆಳಗ್ಗೆ 10 ಗಂಟೆಗೆ ಮುಂದೂಡಲಾಗಿದ್ದು, ಸ್ಪೀಕರ್ ಯು.ಟಿ. ಖಾದರ್ ಮತ್ತು ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಧರಣಿ ನಿರತ ವಿಪಕ್ಷಗಳ ಶಾಸಕರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.
- Advertisement -


