- Advertisement -
![]()
- Advertisement -
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಫೆ.03 ರಂದು ಮಂಗಳವಾರ ನಸುಕಿನ ಜಾವದಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ದಿ. ಶೀನಪ್ಪ ಎಂಬವರ ಮಗಳಾಗಿರುವ ಈಕೆ ಫೆ.2 ರಂದು ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವರು ಫೆ.3 ರಂದು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಹತ್ತನೇ ತರಗತಿಯ ವರೆಗೆ ಕಲಿತಿರುವ ಈಕೆ 4 ಅಡಿ 6 ಇಂಚು ಎತ್ತರವಿದ್ದು, ಸಪೂರ ಶರೀರ, ಉರುಟು ಮುಖವನ್ನು ಹೊಂದಿರುತ್ತಾರೆ. ಕನ್ನಡ ತುಳು ಭಾಷೆಯನ್ನು ಮಾತನಾಡುತ್ತಾರೆ. ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಠಾಣಾಧಿಕಾರಿ ಸುತೇಶ್ ಎಸ್ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
- Advertisement -


