Saturday, June 6, 2026
Homeಕರಾವಳಿಉಡುಪಿಕಾರ್ಕಳ,:  ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರಿಗೆ ಗಂಭೀರ ಗಾಯ

ಕಾರ್ಕಳ,:  ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಕಾರ್ಕಳ,:  ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಾರ್ಕಳ ತಾಲೂಕಿನ ಅತ್ತೂರು ಚರ್ಚ್ ಬಳಿ ನಡೆದಿದೆ. ರುದ್ರೇಶ್ ಹಾಗೂ ಹರೀಶ್ ಗಾಯಗೊಂಡ ವಿದ್ಯಾರ್ಥಿಗಳು.  ನಿಟ್ಟೆ ಸಮೀಪದ ದೂಪದಕಟ್ಟೆಯಿಂದ ಕಾರ್ಕಳ ಬರುತ್ತಿದ್ದ ಕಾರಿಗೆ ಕಾರ್ಕಳದಿಂದ ದೂಪದಕಟ್ಟೆಯತ್ತ ಸಾಗುತ್ತಿದ್ದ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಬೈಕ್ ರಸ್ತೆ ದಾಟಿ ಪೊದೆಗೆ ಉರುಳಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸವಾರರನ್ನು ಕಾರ್ಕಳದ ಆಸ್ಪತ್ರೆಯೊಂದರಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!