- Advertisement -
![]()
- Advertisement -
ಹರಾರೆ: ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ಅನ್ನು ಭಾರತ ತಂಡ ಗೆದ್ದುಕೊಂಡಿದೆ. ಈ ಮೂಲಕ ಆರನೇ ಬಾರಿಗೆ ಭಾರತ ಪ್ರಶಸ್ತಿ ಜಯಿಸಿದೆ.
ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ನೂರು ರನ್ ಗಳ ಜಯ ಗಳಿಸಿದೆ.
ಭಾರತದ ಪರ ವೈಭವ್ ಸೂರ್ಯವಂಶಿ 80 ಎಸೆತಗಳಲ್ಲಿ 175 ರನ್ ಸಿಡಿಸಿದ್ದು 411 ರನ್ ಗಳನ್ನು ಟೀಂ ಇಂಡಿಯಾ ಗಳಿಸಿತ್ತು. ಆದರೆ ಇಂಗ್ಲೆಂಡ್ 311 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು.
ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಸ್ಫೋಟಕ ಬ್ಯಾಟಿಂಗ್ ನಡೆಸಿದ ವೈಭವ್ ಸೂರ್ಯವಂಶಿ 15 ಸಿಕ್ಸರ್ ಮತ್ತು 15 ಬೌಂಡರಿ ಸಿಡಿಸಿದ್ದರು.
- Advertisement -


