- Advertisement -
![]()
- Advertisement -
ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಇಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದರು.
ಮಂಗಳೂರಿನಲ್ಲಿರುವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅರೋಗ್ಯ ಕ್ಷೇಮ ವಿಚಾರಿಸಿದರು.
ಮಾಜಿ ಸಚಿವ ರಮಾನಾಥ ರೈ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮತ್ತಿತರರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
ಪುತ್ತೂರಿನಲ್ಲಿ ಕಾಂಗ್ರೆಸ್ ಭವನದ ಶಿಲಾನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿ.ಕೆ. ಶಿವಕುಮಾರ್ ಇಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದರು.
- Advertisement -


