- Advertisement -
![]()
- Advertisement -
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿಗೆ ಮಲೇಶಿಯಾದಿಂದ ಬಂದ ಪ್ರಯಾಣಿಕನೊರ್ವನ ಬಳಿಯಿದ್ದ ಒಂದು ಕೋಟಿ 91 ಲಕ್ಷ ರೂ. ಮೌಲ್ಯದ 5.48 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನೂ ಮತ್ತೊಂದು ಪ್ರಕರಣದಲ್ಲಿ ಪುಕೇಟ್ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಒಂದು ಕೋಟಿ ಆರು ಲಕ್ಷ ರೂ. ಮೌಲ್ಯದ 3.03 ಕೆಜಿ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಮೂವರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ.
- Advertisement -


