- Advertisement -
![]()
- Advertisement -
ಉಡುಪಿ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವಾಗ ಅವರ ರುಂಡ ಬೇರ್ಪಟ್ಟ ಹೃದಯವಿದ್ರಾವಕ ಅಂಬಾಗಿಲು ವಾರ್ಡ್ನ ಕಕ್ಕುಂಜೆ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.ಪುರುಷೋತ್ತಮ ನಾಯಕ್ (52) ಮೃತ ವ್ಯಕ್ತಿ.
ಪುರುಷೋತ್ತಮ ನಾಯಕ್ ಅವರು ತಮ್ಮ ಮನೆಯ ಬಾವಿಯಲ್ಲಿ ನೈಲಾನ್ ಹಗ್ಗದ ಸಹಾಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ರುಂಡ ಬೇರ್ಪಟ್ಟಿದೆ. ಇನ್ನು ಪುರುಷೋತ್ತಮ ನಾಯಕ್ ಅವರು ಮಣಿಪಾಲದ ಹೋಟೆಲ್ ಒಂದರಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲದೇ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಕಕ್ಕುಂಜೆಯ ಕಟ್ಟೆ ಮಹಾದೇವಿ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಆರ್ಥಿಕ ಸಮಸ್ಯೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
- Advertisement -


