Wednesday, June 24, 2026
Homeಅಪರಾಧಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಯುವಕನ ಬಂಧನ

ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಯುವಕನ ಬಂಧನ

- Advertisement -
- Advertisement -

ಕೋಟ: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಓರ್ವ ಯುವಕನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪದ ಪಾಂಡೇಶ್ವರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿ ಅಕ್ರಮವಾಗಿ ಬೆಟ್ಟಿಂಗ್‌ ನಡೆಸುತ್ತಿದ್ದ ಕಾರಣಕ್ಕೆ ಬ್ರಹ್ಮಾವರ ತಾಲೂಕಿನ ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆ ನಿವಾಸಿ ಮನಿತ್(26) ಎಂಬ ಆರೋಪಿಯನ್ನು ಬಂಧಿಸಲಾಗಿದೆ.

ಫೆ.9ರಂದು ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಸಿಬ್ಬಂದಿ ಜೊತೆಗೆ ಸ್ಥಳಕ್ಕೆ ದಾಳಿ ನಡೆಸಿದರು.

ಈ ವೇಳೆ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಸಾರ್ವಜನಿಕರು ಸ್ಥಳದಿಂದ ಓಡಿ ಹೋಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಮನಿತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!