Saturday, June 6, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಮಾದಕ ವಸ್ತು ಎಂ.ಡಿ.ಎಂ.ಎ. ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಮಾದಕ ವಸ್ತು ಎಂ.ಡಿ.ಎಂ.ಎ. ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ

- Advertisement -
- Advertisement -

ಉಪ್ಪಿನಂಗಡಿ: ಮಾದಕ ವಸ್ತು ಎಂ.ಡಿ.ಎಂ.ಎ. ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉಪ್ಪಿನಂಗಡಿ ಗ್ರಾಮದ ಪಂಜಳಲ್ಲಿ ನಡೆದಿದೆ. ಯಹ್ಯಾ ಕೊಕ್ಕಡ (48) ಬಂಧಿತ ಆರೋಪಿ.

ದಿನಾಂಕ 10.02.2026 ರಂದು ಸಂಜೆ 6 ಗಂಟೆಗೆ ಉಪ್ಪಿನಂಗಡಿ ಗ್ರಾಮದ ಪಂಜಳಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಯಹ್ಯಾ ಕೊಕ್ಕಡ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ  ವಿಚಾರಣೆ ವೇಳೆ ಆತನು ಮಾರಾಟ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪಂಚರ ಸಮ್ಮುಖದಲ್ಲಿ ನಡೆಸಿದ ಮಹಜರಿನಲ್ಲಿ ಆತನಿಂದ ಒಟ್ಟು 2.16 ಗ್ರಾಂ ಎಂ.ಡಿ.ಎಂ.ಎ. (ಅಂದಾಜು ಮೌಲ್ಯ ರೂ. 3,000/-), ಒಂದು ಐಫೋನ್ (ರೂ. 45,000/-), ಒಂದು ಸ್ಯಾಮ್ಸಂಗ್ ಕೀ-ಪ್ಯಾಡ್ ಮೊಬೈಲ್ (ರೂ. 1,000/-) ಸೇರಿದಂತೆ ಒಟ್ಟು ರೂ. 49,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 19/2026 ಕಲಂ: 8(ಸಿ), 22(ಬಿ) ಎನ್‌ಡಿಪಿಎಸ್ ಕಾಯ್ದೆ ಯಂತೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!