Sunday, June 7, 2026
Homeಕರಾವಳಿಉಡುಪಿಉಡುಪಿ:ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ ಮಣಿಪಾಲ ಪೊಲೀಸರು

ಉಡುಪಿ:ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ ಮಣಿಪಾಲ ಪೊಲೀಸರು

- Advertisement -
- Advertisement -

ಉಡುಪಿ:ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಸಿಂಡಿಕೇಟ್‌ ಸರ್ಕಲ್‌ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳದ ಮೊಹಮ್ಮದ್‌ ಅಜ್ಮಲ್‌ (26) ಬಂಧಿತ ಆರೋಪಿ.

ಈತನಿಂದ 1 ಲಕ್ಷ ಮೌಲ್ಯದ 2084 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈತ ಗಾಂಜಾ ಸರಬರಾಜು ಮಾಡಿದ 5 ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರು ಗಾಂಜಾ ಸೇವಿಸಿದ ಬಗ್ಗೆ ದೃಢಪಟ್ಟಿದ್ದು, ಐದು ಮಂದಿರ ವಿರುದ್ಧವೂ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಳೆದ ವರ್ಷ ಆಗಸ್ಟ್ ನಲ್ಲಿ ಈಶ್ವರನಗರದ ಬಳಿಯ ಅಪಾರ್ಟ್‌ಮೆಂಟ್‌ವೊಂದಕ್ಕೆ ದಾಳಿ ನಡೆಸಲಾಗಿತ್ತು. ಈ ವೇಳೆ ಆಪ್ಶಿನ್‌ ಮತ್ತು ಶಿವನಿಧಿ ಆಚಾರ್ಯ ಅವರು ಮಾದಕ ವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿರುವ ವಿಚಾರ ತಿಳಿದುಬಂದಿದೆ. ಅವರಿಂದ ಸುಮಾರು 50 ಸಾವಿರ ರೂ.ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣದ ಜಾಡು ಹಿಡಿದ ಪೊಲೀಸರು ಕಾಸರಗೋಡಿನ ಮನೀಶ್‌ ನನ್ನು ಬಂಧಿಸಿದ್ದರು. ಆತ ನೀಡಿದ ಮಾಹಿತಿ ಮೇರೆಗೆ ಈಗ ಮೊಹಮ್ಮದ್‌ ಅಜ್ಮಲ್‌ ಬಂಧನವಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!