ಮಂಗಳೂರು : ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28), ಮತ್ತು ಮೊಹಮ್ಮದ್ ಶಿಫಾನ್ (28) ಬಂಧಿತರು.
ಬಂಧಿತರಿಂದ ಬರೋಬ್ಬರಿ ₹11.90 ಲಕ್ಷ ಮೌಲ್ಯದ 118.13 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ತಲಪಾಡಿ ಪರಿಸರದಲ್ಲಿ ಬೂದು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಮಿಂಚಿನ ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಡ್ರಗ್ಸ್ ಜೊತೆಗೆ ಕೃತ್ಯಕ್ಕೆ ಬಳಸಿದ ಕಾರು ಮತ್ತು 4 ಮೊಬೈಲ್ ಫೋನ್‌ಗಳನ್ನು ಒಳಗೊಂಡಂತೆ ಒಟ್ಟು ₹17.95 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೂ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ದನ ಕಳ್ಳತನ ಹಾಗೂ ಮೈಯದ್ದಿ ಮೇಲೆ ಹಲ್ಲೆ ಪ್ರಕರಣಗಳು ದಾಖಲಾಗಿದ್ದವು. ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದೆ.
S


