- Advertisement -
![]()
- Advertisement -
ಬೆಳ್ತಂಗಡಿ: ಹಲ್ಲೆ ಪ್ರಕರಣದಲ್ಲಿ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿಯ ಪಾರೆಂಕಿ ಗ್ರಾಮದ ಆಲ್ವಿನ್ ರೊಡ್ರಿಗಸ್ (53) ಬಂಧಿತ.
ಆರೋಪಿ ದಿನಾಂಕ: 11-11-2013 ರಂದು ಚಿತ್ರಶೇಖರ ಮಡಂತ್ಯಾರ್ ಎಂಬರಿಗೆ, ಹಲ್ಲೆ ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ 65/2013 ಕಲಂ 324,504 IPC ಪ್ರಕರಣದಲ್ಲಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ.ಆರೋಪಿಯನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ಫೆ.13 ರಂದು ವಶಕ್ಕೆ ಪಡೆದು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.
- Advertisement -


