Tuesday, June 23, 2026
HomeUncategorizedಬೆಳ್ತಂಗಡಿ : 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಪೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು  ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದಲ್ಲಿ ಆರೋಪಿ ಬಂಧನವಾದ ಬಳಿಕ ಬಿಡುಗಡೆಯಾಗಿ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ, 2015 ರಿಂದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಕವಲಿಗುಡ್ಡೆ ಮನೆಯ ಗಿರಿಯಪ್ಪ ಪೂಜಾರಿ ಮಗ ಯೋಗೀಶ್ ಪೂಜಾರಿ(35) ಎಂಬಾತನನ್ನು ವೇಣೂರು ಪೊಲೀಸರು ಫೆ.13 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಾಗನೂರು ಗ್ರಾಮದಲ್ಲಿ ಬಂಧಿಸಿ FTSC-1 (POCSO) ಮಂಗಳೂರು ನ್ಯಾಯಾಧಿಸರ ಮುಂದೆ ಫೆ.14 ರಂದು ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ವೃತ್ತ ನಿರೀಕ್ಷಕ  ರವಿ ಬಿ.ಎಸ್ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದ ಸಿಬ್ಬಂದಿ ಎಎಸ್ಐ ಬೆಣ್ಣಿಚನ್, ಬಸವರಾಜ ಮತ್ತು ಮೋಹನ  ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -

Latest News

error: Content is protected !!