Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಪೊಲೀಸ್ ವಶಕ್ಕೆ

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಪೊಲೀಸ್ ವಶಕ್ಕೆ

- Advertisement -
- Advertisement -

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಪ್ರಕರಣ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ವಾಹನಗಳ ವಿರುದ್ಧ ಪ್ರಕರಣ ದಾಖಲಾದ ಬಳಿಕ ಪಿಕಪ್ ಮತ್ತು ಟಿಪ್ಪರ್ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಕುಮಾರ್ ನೇತೃತ್ವದಲ್ಲಿ ಫೆ.9ರಂದು KA-21-A-8776 ಪಿಕಪ್ ಮತ್ತು KA-70-2596 ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.

ಈ ಬಗ್ಗೆ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಮತ್ತು ಯೂಟ್ಯೂಬ್ ಚಾನಲ್ ನಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಮಂಗಳೂರು ಡಿಡಿಪಿಐ ಶಿಶಿಧರ್.ಜಿ.ಎಸ್ ಅವರು ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಕುಮಾರ್ ಎಂಬವರನ್ನು ಫೆ.12 ರಂದು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಅವರು ಬಳೆಂಜದ ಧರಣೇಂದ್ರ ಅವರು ನೀಡಿದ ದೂರಿನ ಮೇರೆಗೆ ಪಿಕಪ್ ಮತ್ತು ಟಿಪ್ಪರ್ ವಾಹನಗಳ ವಿರುದ್ಧ BNS 281 ಮತ್ತು 192(A),66 IMV ಅಡಿಯಲ್ಲಿ ಫೆ.12 ರಂದು ಪ್ರಕರಣ ದಾಖಲಿಸಿಕೊಂಡು ಬಳೆಂಜ ನಿವಾಸಿ ಪ್ರವೀಣ್ ಪೂಜಾರಿ ಮಾಲೀಕತ್ವದ ಪಿಕಪ್ ಮತ್ತು ಟಿಪ್ಪರ್ ವಾಹನ ವಶಕ್ಕೆ ಪಡೆದುಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ.

- Advertisement -

Latest News

error: Content is protected !!