- Advertisement -
![]()
- Advertisement -
ಕಡಬ: ಲಂಚ ಸ್ವೀಕರಿಸುವಾಗ ಕಂದಾಯ ನಿರೀಕ್ಷಕ ಸಿಕ್ಕಿ ಬಿದ್ದ ಘಟನೆ ಕಡಬದಲ್ಲಿ ನಡೆದಿದೆ.ಸದ್ಯ ಲಂಚ ಪಡೆಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಡಬ ತಾಲೂಕಿನ 10 ಸೆಂಟ್ಸ್ ಭೂಮಿಯ ಕನ್ವರ್ಷನ್ ಪತ್ರಕ್ಕೆ ಸಹಿ ಹಾಕಲು ಸಂಬಂಧಪಟ್ಟ ಕಂದಾಯ ನಿರೀಕ್ಷಕ ಪ್ರತಿ ಸೆಂಟ್ಸ್ಗೆ ₹100 ರಂತೆ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಒಟ್ಟು ₹1000 ಹಣವನ್ನು ಫೆಬ್ರವರಿ 4, 2026ರಂದು ತಮ್ಮ ಕಚೇರಿಯಲ್ಲೇ ಸ್ವೀಕರಿಸುವಾಗ ದೃಶ್ಯಗಳು ವೀಡಿಯೋದಲ್ಲಿ ಸೆರೆಯಾಗಿರುವುದು ತಿಳಿದುಬಂದಿದೆ.
ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಪಟ್ಟ ಮೇಲಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
- Advertisement -


