Wednesday, June 24, 2026
Homeಕ್ರೀಡೆಇಮ್ರಾನ್ ಖಾನ್ ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಪಾಕಿಸ್ತಾನ ಸರ್ಕಾರಕ್ಕೆ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರಿಂದ ಮನವಿ

ಇಮ್ರಾನ್ ಖಾನ್ ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಪಾಕಿಸ್ತಾನ ಸರ್ಕಾರಕ್ಕೆ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರಿಂದ ಮನವಿ

- Advertisement -
- Advertisement -

ನವದೆಹಲಿ: ಅನಾರೋಗ್ಯಕ್ಕೊಳಗಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಗೆ ಚಿಕಿತ್ಸೆ ನೀಡುವಂತೆ ಮಾಜಿ ಕ್ರಿಕೆಟಿಗರು ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕಪಿಲ್ ದೇವ್, ಸುನೀಲ್ ಗವಾಸ್ಕರ್ ಸೇರಿದಂತೆ ಹಲವು ಮಾಜಿ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರರು ಮನವಿ‌ ಮಾಡಿದ್ದಾರೆ. ಇಮ್ರಾನ್ ಖಾನ್ ಗೆ ನ್ಯಾಯಯುತವಾಗಿ ವೈದ್ಯಕೀಯ ಚಿಕಿತ್ಸೆ ಹಾಗೂ ಕಾನೂನು ರೀತಿಯಲ್ಲಿ ಅವರ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಪಾಕಿಸ್ತಾನದ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರ ಕಣ್ಣುಗಳ ವಿವರವಾದ ವೈದ್ಯಕೀಯ ತಪಾಸಣೆಗೆ ಅವಕಾಶ ನೀಡುವಂತೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ಇಬ್ಬರು ವೈದ್ಯರು ಪರೀಕ್ಷೆಯನ್ನು ಕಣ್ಣಿನ ಪರೀಕ್ಷೆ ನಡೆಸಿದ್ದರು. ಇಮ್ರಾನ್ ಖಾನ್ ಅವರ ಬಲಗಣ್ಣಿನಲ್ಲಿ ಕೇವಲ ಶೇ.15 ರಷ್ಟು ಮಾತ್ರ ದೃಷ್ಟಿ ಇದೆ ಎಂದು ಹೇಳಲಾಗಿತ್ತು.

ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಬಳಿಕ ಇಮ್ರಾನ್ ಖಾನ್ ರನ್ನು ಲಾಹೋರ್‌ನ ಅವರ ನಿವಾಸದಲ್ಲಿ ಬಂಧಿಸಲಾಗಿತ್ತು. ಸದ್ಯ ಅವರನ್ನು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಇರಿಸಲಾಗಿದೆ.

- Advertisement -

Latest News

error: Content is protected !!