- Advertisement -
![]()
- Advertisement -
ಕಾರ್ಕಳ : ಮನೆಯಲ್ಲಿ ಕುಳಿತಿದ್ದ ಯುವಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ. ಎರ್ಲಪಾಡಿಯ ನಿವಾಸಿ ಸುಹೇಶ್ ಕುಮಾರ್ (22) ಮೃತ ಯುವಕ.
ಸುಹೇಶ್ ಕುಮಾರ್ 15 ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು, ಔಷಧಿ ತೆಗೆದುಕೊಳ್ಳುತ್ತಿದ್ದರು. ಗುರುವಾರ ಮನೆಯಲ್ಲಿ ಕುಳಿತಿದ್ದವರು ಒಮ್ಮೆಲೆ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸುಹೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


