
ಮಂಗಳೂರು: ಅಂತರ್ ರಾಜ್ಯ ಗಾಂಜಾ ಮಾರಾಟಗಾರನ್ನು ಬಂಧಿಸಿ 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾ ವಶಪಡಿಸ್ಕೊಂಡಿದ್ದಾರೆ.
1].ಕರಣ್ ಬಾಬು ರಾಂ ಜಾದವ್ (27) 2]. ಸಮೀರ್ ಶಾ (19) 3].ಎಂ.ಹೆಚ್. ಮಯ್ಯದಿ(48). ಇಬ್ರಾಹಿಂ ಕಲೀಲ್ ಪ್ರಾಯ (47) ಬಂಧಿತರು.
ಪ್ರಕರಣದ ವಿವರ :
ದಿನಾಂಕ:21-02-2026 ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಹೊರ ರಾಜ್ಯ ದಿಂದ ತಂದಿರುವ ಬಗ್ಗೆ ಮಾಹಿತಿ ಪಡೆದು ಉತ್ತರ ಉಪ ವಿಭಾಗದ ಎ.ಸಿ.ಪಿ. ರವರು ಮತ್ತು ಅವರ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಪಣಂಬೂರು ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಿ ಅವರ ವಶದಲ್ಲಿದ್ದ 22 ಕೆ.ಜಿ 250 ಗ್ರಾಂ ಗಾಂಜಾ (ಅಂದಾಜು ಮೌಲ್ಯ ರೂ. 11,12,500) ಮತ್ತು 6 ಮೊಬೈಲ್ ಪೋನ್ (ಅಂದಾಜು ಮೌಲ್ಯ ರೂ. 18,000) ನ್ನು ಹಾಗೂ ಗಾಂಜಾ ಸಾಗಿಸಲು ಬಳಸಿದ KA 20 H.E. 2915 ಮತ್ತು K.A 19 H.P 6021 ಸ್ಕೂಟರ್ ಗಳನ್ನು (ಅಂದಾಜು ಮೌಲ್ಯ ರೂ. 1,00,000) ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.
ಆರೋಪಿತರ ಪೈಕಿ ಕರಣ್ ಬಾಬು ರಾಂ ಜಾದವ್ ಮತ್ತು ಸಮೀರ್ ಶಾ ಎಂಬವರು ಗಾಂಜಾವನ್ನು ಮಹಾರಾಷ್ಟ್ರ ಮಯ್ಯದಿ ಹಾಗೂ ಮಧ್ಯ ಪ್ರದೇಶ ಶಾರೂಕ್ ಎಂಬವರಿಂದ ಪಡೆದು ತಂದು ಉಡುಪಿ ಹೆಜಮಾಡಿ ಕೋಡಿಯ ಎಂ.ಹೆಚ್. ಮಯ್ಯದಿ ಮತ್ತು ಮಂಗಳೂರಿನ ಇಬ್ರಾಹಿಂ ಕಲೀಲ್ ರವರಿಗೆ ನೀಡುತ್ತಿದ್ದು, ಈ ಇಬ್ಬರು ಗಾಂಜಾವನ್ನು ಉಡುಪಿ, ಮಲ್ಪೆ, ಕಾರ್ಕಳ, ಮುಲ್ಕಿ, ಸುರತ್ಕಲ್, ಪಣಂಬೂರು, ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿದು ಬಂದಿದ್ದು, ಈ ಹಿಂದೆ ಕೂಡಾ ಹಲವು ಭಾರಿ ಗಾಂಜಾವನ್ನು ಅಕ್ರಮವಾಗಿ ತಂದು ಉಡುಪಿ ಜಿಲ್ಲೆ ಮತ್ತು ಮಂಗಳೂರು ನಗರದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ.
ಆರೋಪಿಗಳಿಂದ ಸ್ವಾಧೀನಪಡಿಸಿಕೊಳ್ಳಲಾದ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಗಳ ಒಟ್ಟು ಮೌಲ್ಯ 12,30,500 ರೂಗಳಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.21/2026 ಕಲಂ:8(C), 20(b),(ii)(C) NDPS Act ನಂತೆ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿರುತ್ತದೆ.


