Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

ಬೆಳ್ತಂಗಡಿ: ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

- Advertisement -
- Advertisement -

 ಬೆಳ್ತಂಗಡಿ: ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷರ ಶ್ರೀ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಶ್ರೀ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಶ್ರೀ ಗಣೇಶ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಶ್ರೀಹರಿಯವರು ಫೆಬ್ರವರಿ 20 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು.

 ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು. ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್, ಪ್ರಗತಿಪರ ಕೃಷಿಕರು ಮತ್ತು ಸಮಾಜ ಸೇವಕರಾದ ಶ್ರೀ ಗ್ರೇಸಿಯನ್ ವೇಗಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!