Saturday, June 6, 2026
Homeಕರಾವಳಿಮಂಗಳೂರುಬಂಟ್ವಾಳ : ಕೆಲಸ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಯುವಕ ಸಾವು

ಬಂಟ್ವಾಳ : ಕೆಲಸ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಯುವಕ ಸಾವು

- Advertisement -
- Advertisement -

ಬಂಟ್ವಾಳ : ಕೆಲಸ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಯುವಕ ಸಾವನ್ನಪ್ಪಿರುವ ಘಟನೆ ಕುಕ್ಕಿಪಾಡಿ ಎಂಬಲ್ಲಿ ನಡೆದಿದೆ. ಪ್ರಶಾಂತ್ ಆಚಾರ್ಯ(24) ಮೃತ ಯುವಕ.

ಪ್ರಶಾಂತ್ ಆಚಾರ್ಯ ಸಿದ್ದಕಟ್ಟೆಯ ಯಂತ್ರೋಪಕರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಫೆ.22ರಂದು ಅರಂತಾಡಿ ಮನೆಯೊಂದರಲ್ಲಿ ಕೃಷಿ ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ಸುಮಾರು 11 ಗಂಟೆಯ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಸಿದ್ದಕಟ್ಟೆಯ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಪಡೆದು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಪ್ರಶಾಂತ್ ಆಚಾರ್ಯ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

- Advertisement -

Latest News

error: Content is protected !!