Wednesday, June 3, 2026
Homeಕರಾವಳಿಮಂಗಳೂರುಮಾರ್ಚ್ 3 ರಂದು ಚಂದ್ರಗ್ರಹಣ ಹಿನ್ನೆಲೆ: ದ.ಕ. ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ದರ್ಶನದ ಸಮಯ ಬದಲಾವಣೆ

ಮಾರ್ಚ್ 3 ರಂದು ಚಂದ್ರಗ್ರಹಣ ಹಿನ್ನೆಲೆ: ದ.ಕ. ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ದರ್ಶನದ ಸಮಯ ಬದಲಾವಣೆ

- Advertisement -
- Advertisement -

ಸುಬ್ರಹ್ಮಣ್ಯ: ಮಾರ್ಚ್ 3 ರಂದು ಚಂದ್ರ ಗ್ರಹಣ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ದೇವರ ದರ್ಶನ ಮತ್ತು ಸೇವೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಕಡಬ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರ್ಚ್ 2 ಮತ್ತು 3 ರಂದು ಸರ್ಪ ಸಂಸ್ಕಾರ ಸೇವೆ ಇರುವುದಿಲ್ಲವಾಗಿದ್ದು, ಮಾರ್ಚ್ 3 ಚಂದ್ರ ಗ್ರಹಣದ ದಿನ ಮಾರ್ಚ್ 3 ರಂದು ಯಾವುದೇ ಸೇವೆಗಳು ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

ಮಾರ್ಚ್ 3 ರಂದು ಬೆಳಗ್ಗೆ 8 ಗಂಟೆಗೆ ಮಹಾಪೂಜೆ ನಡೆಯಲಿದ್ದು, 9 ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ. ರಾತ್ರಿ 7 ಗಂಟೆಯ ನಂತರ ದೇವಸ್ಥಾನದಲ್ಲಿ ಪೂಜೆ ನಡೆಯಲಿದ್ದು, 9 ಗಂಟೆಗೆ ಭಕ್ತರ ದರ್ಶನಕ್ಕೆ ಬಾಗಿಲು ತೆರೆಯಲಾಗುತ್ತದೆ.

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿಯೂ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಮಾರ್ಚ್ 3 ರಂದು ಮಧ್ಯಾಹ್ನ 1:30 ರವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ. ಸಂಜೆ 7:30ರ ಬಳಿಕ ದೇವರ ದರ್ಶನಕ್ಕೆ ಅವಕಾಶವಿದ್ದು, ಗ್ರಹಣದ ಹಿನ್ನೆಲೆಯಲ್ಲಿ ವಿಶೇಷ ಹೋಮ ಮತ್ತು ಪೂಜೆ ನಡೆಯಲಿದೆ.

ಇನ್ನು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಹುಣ್ಣಿಮೆ ದಿನ ನಡೆಯುತ್ತಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಬದಲಾವಣೆ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದ್ದು, ಮೂರು ಹಂತದಲ್ಲಿ ನಡೆಯುತ್ತಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಬೆಳಗ್ಗೆ ಒಂದೇ ಹಂತದಲ್ಲಿ ನಡೆಸಲು ನಿರ್ಧರಿಸಲಾಗಿದೆ.

- Advertisement -

Latest News

error: Content is protected !!