- Advertisement -
![]()
- Advertisement -
ಇರಾನ್‌ನ ಹೊಸ ಸರ್ವೋಚ್ಚ ನಾಯಕರಾಗಿ ಇರಾನಿನ ಮಾಜಿ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಾಮಿನೈ ಅವರ ಪುತ್ರ ಮೊಜ್ತಬಾ ಖಾಮಿನೈ ಅವರನ್ನು ನೇಮಕ ಮಾಡಲಾಗಿದೆ.
ಇರಾನ್‌ನ ತಜ್ಞರ ಸಭೆಯು ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದ್ದು, ಪ್ರಭಾವಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಒತ್ತಡದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ‘ಇರಾನ್ ಇಂಟರ್‌ನ್ಯಾಷನಲ್’ ವರದಿ ಹೇಳಿದೆ.
56 ವರ್ಷದ ಮೊಜ್ತಬಾ ಖಾಮಿನೈ, ದಿವಂಗತ ಅಲಿ ಖಾಮಿನೈ ಅವರ ಎರಡನೇ ಪುತ್ರರು. ಹಲವು ವರ್ಷಗಳಿಂದ ತೆರೆಮರೆಯಲ್ಲಿ ಪ್ರಭಾವಿ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತದೆ. ಐಆರ್‌ಜಿಸಿ ಹಾಗೂ ಬಸಿಜ್ ಅರೆಸೈನಿಕ ಜಾಲಗಳ ಮೇಲೆ ಆಳವಾದ ಪ್ರಭಾವ ಹೊಂದಿದ್ದಾರೆ ಎಂಬ ವರದಿಗಳಿವೆ. ಇರಾನ್–ಇರಾಕ್ ಯುದ್ಧದ ಅನುಭವಿಯೂ ಆಗಿರುವ ಅವರು, ದೇಶದ ಭದ್ರತಾ ವ್ಯವಸ್ಥೆಯೊಂದಿಗೆ ನಿಕಟ ಸಮನ್ವಯ ಹೊಂದಿದ್ದಾರೆ ಎನ್ನಲಾಗಿದೆ.
- Advertisement -


