- Advertisement -
![]()
- Advertisement -
ಮಂಗಳೂರು: ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕುಂಪಲ ಲಕ್ಷ್ಮಿಗುಡ್ಡೆ ನಿವಾಸಿ ಕಿರಣ್ (47) ಮೃತರು. ರಣ್ ರೈಲ್ವೆ ಹಳಿಯ ಬಳಿ ಕುಳಿತಿದ್ದಾಗ ಹಾದುಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದು ಸಾವನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಮೃತರ ಜೇಬಿನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಫೋನ್ ವಿವರಗಳ ಆಧಾರದ ಮೇಲೆ, ಪೊಲೀಸರು ಆತನ ಗುರುತು ಪತ್ತೆ ಹಚ್ಚಿ ಆತನ ಕುಟುಂಬ ಸದಸ್ಯರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದರು. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
- Advertisement -


