Saturday, June 6, 2026
Homeತಾಜಾ ಸುದ್ದಿರಾಜ್ಯಸಭಾ ಚುನಾವಣೆಗೆ ಜೆಡಿಯು ಅಭ್ಯರ್ಥಿಯಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ರಾಜ್ಯಸಭಾ ಚುನಾವಣೆಗೆ ಜೆಡಿಯು ಅಭ್ಯರ್ಥಿಯಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

- Advertisement -
- Advertisement -

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಜೆಡಿಯು ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಇಪ್ಪತ್ತು ವರ್ಷಗಳ ಕಾಲ ಬಿಹಾರ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ನಿತೀಶ್ ಕುಮಾರ್ ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ.

2005 ರಿಂದ ಬಿಹಾರ ಮುಖ್ಯಮಂತ್ರಿ ಆಗಿದ್ದ ನಿತೀಶ್ ಕುಮಾರ್ ದಾಖಲೆಯ ಹತ್ತು ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.ಮಾರ್ಚ್ 16 ರಂದು ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಹಾರದಿಂದ ಐದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈ ತಿಂಗಳಾಂತ್ಯಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸಂಭವ ಇದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಬಿಹಾರ ಸಿಎಂ ಸ್ಥಾನ ದೊರೆಯುವ ಸಾಧ್ಯತೆ ಇದೆ.

ಹಾಲಿ ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧುರಿ ಮತ್ತು ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ನಿತ್ಯಾನಂದ ರೈ ಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!