ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ಮಾಡುವುದನ್ನು ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.


