- Advertisement -
![]()
- Advertisement -
ಉಪ್ಪಿನಂಗಡಿ: ಬೈಕ್ ಮತ್ತು ಕಾರುಗಳ ನಡುವೆ ಅಪಘಾತ ಸಂಭವಿಸಿ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಬಂದಾರು ಗ್ರಾಮದ ಶುದಾಯ ನಿವಾಸಿ ಚಿದಾನಂದ ಗೌಡ (56) ಸಾವನ್ನಪ್ಪಿದ ಘಟನೆ 34ನೇ ನಕ್ಕಿಬಾಡಿ ಬೊಳ್ಳಾರ್ ಎಂಬಲ್ಲಿ ಭಾನುವಾರ ನಡೆದಿದೆ.
ಘಟನೆ ಸಂಭವಿಸಿದಾಗ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆ ಫಲಕಾರಿ ಆಗದ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


