Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನೇತ್ರಾವತಿ ಸೇತುವೆಯ ಬಳಿ ಪಿಕಪ್ ಹಾಗೂ ಬೈಕ್‌ ನಡುವೆ ಅಪಘಾತ ಪ್ರಕರಣ; ಗಂಭೀರ...

ಬೆಳ್ತಂಗಡಿ : ನೇತ್ರಾವತಿ ಸೇತುವೆಯ ಬಳಿ ಪಿಕಪ್ ಹಾಗೂ ಬೈಕ್‌ ನಡುವೆ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಫಲಿಸದೇ ಸಾವು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್‌ ನಡುವೆ ನೇತ್ರಾವತಿ ಸೇತುವೆಯ ಬಳಿ ಮಾ.2 ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಬೈಕ್‌ ಸವಾರ ಕನ್ಯಾಡಿ ಕೊರಗಪ್ಪ ಪೂಜಾರಿಯವರ ಪುತ್ರ ನವೀನ್ ಪೂಜಾರಿ ಗಂಭೀರ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಾ.12 ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!