Monday, June 8, 2026
Homeತಾಜಾ ಸುದ್ದಿದೇಶದಲ್ಲಿ ಇಂಧನ ಕೊರತೆ ಇಲ್ಲ, ಸಾಕಷ್ಟು ಕಚ್ಛಾತೈಲವಿದೆ; ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್...

ದೇಶದಲ್ಲಿ ಇಂಧನ ಕೊರತೆ ಇಲ್ಲ, ಸಾಕಷ್ಟು ಕಚ್ಛಾತೈಲವಿದೆ; ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿಕೆ

- Advertisement -
- Advertisement -

ನವದೆಹಲಿ: ದೇಶದಲ್ಲಿ ಇಂಧನ ಕೊರತೆ ಇಲ್ಲ ಮತ್ತು ಸಾಕಷ್ಟು ಕಚ್ಛಾ ತೈಲವಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಇಂದು ಹೇಳಿಕೆ ನೀಡಿದ ಹರ್ದೀಪ್ ಸಿಂಗ್ ಪುರಿ,ಭಾರತದ ಕಚ್ಚಾ ತೈಲ ಪೂರೈಕೆಯ ಸ್ಥಿತಿ ಸುರಕ್ಷಿತವಾಗಿದ್ದು,ಜನರು ವದಂತಿಗಳನ್ನು ಹರಡಬಾರದು ಎಂದು ಹೇಳಿದ್ದಾರೆ.

ತೈಲ ಬಿಕ್ಕಟ್ಟು ದೀರ್ಘಕಾಲದವರೆಗೆ ಮುಂದುವರಿದರೆ ಕೇಂದ್ರ ಸರ್ಕಾರವು ಪರಿಸ್ಥಿತಿಯನ್ನು ನಿಯಂತ್ರಿಸುವ ಸ್ಥಿತಿಯಲ್ಲಿದೆ ಎಂದು ಹೇಳಿರುವ ಕೇಂದ್ರ ಸಚಿವರು, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ, 40 ದೇಶಗಳಿಂದ ಕಚ್ಛಾ ತೈಲವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಮಧ್ಯೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ವಿದೇಶಾಂಗ ಇಲಾಖೆ ಸಚಿವ
ಡಾ. ಎಸ್. ಜೈಶಂಕರ್ ಮತ್ತು ಪೆಟ್ರೋಲಿಯಂ ಇಲಾಖೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ.

- Advertisement -

Latest News

error: Content is protected !!