Thursday, June 4, 2026
Homeಕರಾವಳಿಮಂಗಳೂರುಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ; ಕಾರಿನಲ್ಲಿದ್ದ ಬೆಳ್ತಂಗಡಿಯ...

ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ; ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವು

- Advertisement -
- Advertisement -

ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಂದ್ರಶೇಖರ (57) ಶಿಶಿಲ, ಜನಾರ್ದನ ಗೌಡ (58) ಉಜಿರೆ, ಶ್ರೀಧರ ಗೌಡ (61) ಮರಕಡ ರವರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೊರ್ವ ಸುರೇಶ (58) ಉಜಿರೆ ರವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಸಂಬಂಧಿಕರಾಗಿದ್ದಾರೆ.

ಸಕಲೇಶಪುರದಲ್ಲಿ ಮದುವೆಗೆ ಹೋಗಿ ಕೊಕ್ಕಡಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಮಧ್ಯಾಹ್ನ 2.30ಕ್ಕೆ ಹೊರಟು ಬೆಂಗಳೂರು ಮೂಲಕ ತಿರುಪತಿ ಹೊರಟಿರುವ ರಾಜಹಂಸ ಬಸ್ ಹಾಗೂ ಕಾರಿನ ಮಧ್ಯೆ ಗುಂಡ್ಯದ ಗಡಿ ದೇವಸ್ಥಾನದ ಸಮೀಪ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತ ನಡೆದ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ರಕ್ತಸಿಕ್ತವಾಗಿದ್ದವರನ್ನು ಸ್ಥಳೀಯರ ನೆರವಿನೊಂದಿಗೆ ಹೊರತೆಗೆದಿದ್ದಾರೆ.

- Advertisement -

Latest News

error: Content is protected !!