Thursday, June 4, 2026
Homeತಾಜಾ ಸುದ್ದಿಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ದ್ದ ಖಾಸಗಿ ಬಸ್‌ನಲ್ಲಿ 90 ಲಕ್ಷ ರೂಪಾಯಿ ಮೌಲ್ಯದ ಚಿನ್ನ ದರೋಡೆ

ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ದ್ದ ಖಾಸಗಿ ಬಸ್‌ನಲ್ಲಿ 90 ಲಕ್ಷ ರೂಪಾಯಿ ಮೌಲ್ಯದ ಚಿನ್ನ ದರೋಡೆ

- Advertisement -
- Advertisement -

ಕೊಪ್ಪಳ: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ದ್ದ ಖಾಸಗಿ ಬಸ್‌ನಲ್ಲಿ 90 ಲಕ್ಷ ರೂಪಾಯಿ ಮೌಲ್ಯದ ಚಿನ್ನ ದರೋಡೆ ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ.

 ‘ಶ್ರೀ ಕುಮಾರ್’ ಹೆಸರಿನ ಖಾಸಗಿ ಬಸ್ ಕೊಪ್ಪಳದ ಹೊರವಲಯದಲ್ಲಿ ರಾತ್ರಿ ಊಟಕ್ಕಾಗಿ ಹೋಟೆಲ್ ಒಂದರ ಬಳಿ ನಿಂತಿತ್ತು. ಬಸ್‌ನಲ್ಲಿದ್ದ ಪ್ರಯಾಣಿಕರಾದ ಮಹಮ್ಮದ್ ಮತ್ತು ಇರ್ಷಾದ್ ಎಂಬುವವರು ಊಟಕ್ಕೆ ಕೆಳಗಿಳಿದಿದ್ದರು. ಈ ಸಮಯಕ್ಕಾಗಿ ಕಾಯುತ್ತಿದ್ದ ಖದೀಮರು, ಕ್ಷಣಾರ್ಧದಲ್ಲಿ ಬಸ್ ಹತ್ತಿ ಅವರ ಬ್ಯಾಗಿನಲ್ಲಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ.

ದರೋಡೆಕೋರರು ಅತ್ಯಂತ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದರು ಅನ್ನೋದು ತನಿಖೆ ವೇಳೆ ಬಯಲಾಗಿದೆ. ಈ ಗ್ಯಾಂಗ್‌ನ ಮಾಸ್ಟರ್ ಮೈಂಡ್ ಸಿಂಧನೂರಿನಿಂದಲೇ ಅದೇ ಬಸ್ ಹತ್ತಿ ಪ್ರಯಾಣಿಕರ ಮೇಲೆ ಕಣ್ಣಿಟ್ಟಿದ್ದ. ಉಳಿದ ಮೂವರು ಖದೀಮರು ಬಸ್ಸನ್ನು ಬೇರೆ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು.
ದರೋಡೆಕೋರರು ಬಸ್ ಹತ್ತುವುದು ಮತ್ತು ಬಂಗಾರದ ಚೀಲದೊಂದಿಗೆ ಪರಾರಿಯಾಗುವ ದೃಶ್ಯಗಳು ಹೋಟೆಲ್‌ನ ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಈ ದೃಶ್ಯಾವಳಿಗಳನ್ನು ಆಧರಿಸಿ ಕೊಪ್ಪಳ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!