- Advertisement -
![]()
- Advertisement -
ಸುಳ್ಯ; ಬಾರ್ ನಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಸುಳ್ಯದ ಶ್ರೀರಾಮ್ ಪೇಟೆಯಲ್ಲಿರುವ ರಾಜೇಶ್ ಬಾರ್‌ನಲ್ಲಿ ನಡೆದಿದೆ. ಪೊ
14.03.2026 ರಂದು ಸಂಜೆ ನಿತೇಶ್ ಆರ್.ಕೆ (33) ಮತ್ತು ಅವರ ಸ್ನೇಹಿತ ಹರೀಶ್ ಮೇಲೆ ಇಬ್ಬರು ಯುವಕರು ಕ್ಷುಲ್ಲಕ ಕಾರಣಕ್ಕೆ ಅಜ್ಜಾವರ ಗ್ರಾಮದ ರಾಜೇಶ್ ಬಿ.ಆರ್ (27) ಮತ್ತು ದಯಾನಂದ್ (30) ಎಂಬವರು ಚೂರಿಯಿಂದ ಹಲ್ಲೆ ಮಾಡಿದ್ದಾರೆ. ಹರೀಶನ ಎಡ ಕುತ್ತಿಗೆ ಹಾಗೂ ಇಬ್ಬರ ಎಡ ಕೈಗಳಿಗೆ ಗಾಯಗಳಾಗಿವೆ. ಬಾರ್‌ನಲ್ಲಿದ್ದ ಇತರರು ಹಲ್ಲೆ ತಡೆದು ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಗಾಯಾಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
- Advertisement -


