- Advertisement -
![]()
- Advertisement -
ನವದೆಹಲಿ: ಐದು ರಾಜ್ಯಗಳ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ. ನವದೆಹಲಿಯಲ್ಲಿ ಇಂದು ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದೆ.
ಅಸ್ಸಾಂ, ಕೇರಳ ಮತ್ತು ಪಾಂಡಿಚೇರಿ ವಿಧಾನಸಭೆಗಳಿಗೆ ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 23 ರಂದು ಚುನಾವಣೆ ನಡೆಯಲಿದೆ.
ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್ 23 ಮತ್ತು 26 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ಐದು ರಾಜ್ಯಗಳ ಚುನಾವಣಾ ಮತ ಎಣಿಕೆ ಮೇ 4 ರಂದು ನಡೆಯಲಿದೆ.
ಈ ಮಧ್ಯೆ ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕೂಡಾ ಏಪ್ರಿಲ್ 9 ರಂದೇ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.
- Advertisement -


