Friday, August 28, 2026
Homeಕರಾವಳಿಮಂಗಳೂರುಮೂಡಬಿದಿರೆ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ; ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸಾವು

ಮೂಡಬಿದಿರೆ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ; ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸಾವು

- Advertisement -
- Advertisement -

ಮೂಡಬಿದಿರೆ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಪುತ್ತಿಗೆ ಗ್ರಾ.ಪಂ. ವ್ಯಾಪ್ತಿಯ ಹಂಡೇಲು ಸುತ್ತು ಬಳಿ ನಡೆದಿದೆ.

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಮೈಸೂರು ಮೂಲದ ಸಮೃದ್ಧ ಮೃತರು.

 ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿದ್ದ ಕ್ರೀಡಾಕೂಟದಿಂದ ಮಿಜಾರ್ ನಲ್ಲಿರುವ ಹಾಸ್ಟೆಲ್ ಗೆ ಸಮೃದ್ಧ್ ಸಹಪಾಠಿ ನಿಶಾಂತ್ ಜತೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಮಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದು ತೀವ್ರ ವಾಗಿ ಗಾಯಗೊಂಡ ಸಮೃದ್ಧ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಿಶಾಂತ್ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!