- Advertisement -
![]()
- Advertisement -
ಉಡುಪಿ: 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಲ್ಪೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರಿಫ್ ಬಂಧಿತ ಆರೋಪಿ.
ಈತನನ್ನು ಮಲ್ಪೆ ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಯಾದ ಎಚ್‌ಸಿ ಸುರೇಶ್ ಕುಮಾರ್ ಮತ್ತು ಎಚ್‌ಸಿ ವಿಶ್ವನಾಥ್ ಅವರು ಸೋಮವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೊಯ್ಲ ಗ್ರಾಮದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತನನ್ನು ನಂತರ ಉಡುಪಿ CJM ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಮಾರ್ಚ್ 28, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -


