Thursday, June 4, 2026
Homeಕರಾವಳಿಉಡುಪಿಉಡುಪಿ: ಸಾಲದ ಹಣ ಕೇಳಿದ ವಿಚಾರಕ್ಕೆ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲ್ಲಲು ಯತ್ನ

ಉಡುಪಿ: ಸಾಲದ ಹಣ ಕೇಳಿದ ವಿಚಾರಕ್ಕೆ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲ್ಲಲು ಯತ್ನ

- Advertisement -
- Advertisement -

ಉಡುಪಿ: ಸಾಲದ ಹಣ ಕೇಳಿದ ವಿಚಾರಕ್ಕೆ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲ್ಲಲು ಯತ್ನಿಸಿರುವ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರ್ಕಳ ನಿವಾಸಿ ಸುಮಿತ್ ಎಸ್. ಸುವರ್ಣ (29) ಎಂಬವರು ಸ್ನೇಹಿತ, ಹಾಗೇ ಆರೋಪಿಯಾಗಿರುವ ಧೀರಜ್ ಅವರಿಗೆ ಸುಮಾರು ಎರಡು ವರ್ಷಗಳ ಹಿಂದೆ ಧೀರಜ್ ಅವರಿಗೆ 2 ಲಕ್ಷ ರೂ. ಸಾಲ ನೀಡಿದ್ದರು. ಆ ಹಣವನ್ನು ಆರು ತಿಂಗಳಲ್ಲಿ ಹಿಂತಿರುಗಿಸುವುದಾಗಿ ಆರೋಪಿ ತಿಳಿಸಿದ್ದರೂ ಇತನಕ ಹಣವನ್ನು ಹಿಂತಿರುಗಿಸಿರಲಿಲ್ಲ.

ದಿನಾಂಕ 13/03/2026 ರಂದು ಕಾಪು ತಾಲೂಕು ಹೆಜಮಾಡಿ ಗ್ರಾಮದ ಹೆಜಮಾಡಿ ಸ್ಟೇಡಿಯಂ ಬಳಿ ಸುಮಿತ್ ಸಾಲದ ಹಣವನ್ನು ಕೇಳಿದಾಗ ಆರೋಪಿ ಕೋಪಗೊಂಡು “ನಿನ್ನ ಹಣ ಕೊಡೋದಿಲ್ಲ” ಎಂದು ಹೇಳಿ ಕೈಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ನಂತರ ಮನೆಗೆ ಬಾ, ಹಣ ಕೊಡುತ್ತೇನೆ ಎಂದು ಹೇಳಿ ತನ್ನ ಬೈಕ್ ನಲ್ಲಿ ಸುಮಿತ್ ಅವರನ್ನು ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ. ಸ್ಟೇಡಿಯಂನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಬಬ್ಬುಸ್ವಾಮಿ ದೇವಸ್ಥಾನದ ಬಳಿ ರಾತ್ರಿ ಸುಮಾರು 11:50 ಗಂಟೆಗೆ ವಾಹನ ನಿಲ್ಲಿಸಿ ಸುಮಿತ್ ರನ್ನು ಇಳಿಸಿ ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ಹೊಟ್ಟೆಗೆ ತಿವಿದು ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!