Saturday, June 6, 2026
Homeಕರಾವಳಿಮಂಗಳೂರುಮಂಗಳೂರು; 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ...

ಮಂಗಳೂರು; 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು; 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿದ ಆರೋಪದಡಿ ಆರೋಪಿಯ ಬಂಧನ ಕೊಣಾಜೆ  ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೋಟೆಕಾರಿನ ಮಡ್ಯಾರ್ ನಿವಾಸಿ MSC ಲಾಜಿಸ್ಟಿಕ್ಸ್, ಬಿಜೈನಲ್ಲಿ ಕೆಲಸ ಮಾಡುವ ಆಶೀಶ್ ಪೂಜಾರಿ (33) ಬಂಧಿತ ಆರೋಪಿ.

ಆರೋಪಿಯ ವಿರುದ್ಧ ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ POCSO ಕಾಯ್ದೆಯ ಸೆಕ್ಷನ್ 4, 6, 12 ಹಾಗೂ BNS ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!