ಪುತ್ತೂರು; ಪತಿ ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೋಳ್ತಿಲ ಎಂಬಲ್ಲಿ ಮಾರ್ಚ್ 20 ರಂದು ಬೆಳಗ್ಗೆ ನಡೆದಿದೆ. ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಯತ್ನಿಸಿದ್ದು ಆತನ ಸ್ಥಿತಿ ಗಂಭೀರವಾಗಿದೆ.
ಕುಮಾರಮಂಗಲ ಮೂಲದ ಸಾವಿತ್ರಿ (42) ಮೃತ ಮಹಿಳೆ. ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಮೃತ ಪತಿ.
ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ . ಬಳಿಕ ಆತ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ .
ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಘಟನೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.


