Saturday, June 6, 2026
Homeಕರಾವಳಿಮಂಗಳೂರು ಧರ್ಮಸ್ಥಳಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ, ಎಂಟು ಮಂದಿಗೆ ಗಾಯ

 ಧರ್ಮಸ್ಥಳಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ, ಎಂಟು ಮಂದಿಗೆ ಗಾಯ

- Advertisement -
- Advertisement -

ಧರ್ಮಸ್ಥಳಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಎಂಟು ಮಂದಿಗೆ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಸಮೀಪ ನಡೆದಿದೆ.

 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಈ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಕೊಪ್ಪಳ ಜಿಲ್ಲೆಯ ಕುಕ್ಕನೂರಿನಿಂದ ಧರ್ಮಸ್ಥಳದತ್ತ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!