- Advertisement -
![]()
- Advertisement -
ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ 76 ಬಡಗುಬೆಟ್ಟು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಿಷನ್ ಕಾಂಪೌoಡ್ 4ನೇ ಕ್ರಾಸ್‌ನ ನಿವಾಸಿ ಮಂಜುನಾಥ್ ಎಂ.ಡಿ (45) ನಾಪತ್ತೆಯಾದವರು. ಅವರು ಮಾರ್ಚ್ 11 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
168 ಸೆಂ.ಮೀ ಎತ್ತರ, ಸಾಮಾನ್ಯ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
- Advertisement -


