Saturday, June 6, 2026
HomeUncategorizedಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾದಕ ವಸ್ತು ವಶ, 3 ಮಂದಿಯ ಬಂಧನ.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾದಕ ವಸ್ತು ವಶ, 3 ಮಂದಿಯ ಬಂಧನ.

- Advertisement -
- Advertisement -

 ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ 3 ಮಂದಿಯನ್ನು ಬಂಧಿಸಿ ಎಂಡಿಎಂಎ ಮಾದಕ ವಸ್ತುವನ್ನು ವಶ ಪಡಿಸಿಕೊಂಡಿದ್ದಾರೆ.

ಮಂಗಳೂರಿನ ತೊಕ್ಕೊಟ್ಟು ನಿವಾಸಿ ಹೈದರ್ @ ಹೈದರ್ ಆಲಿ(53), ಮೊಹಮ್ಮದ್ ಸಜಾದ್ (29), ಉಡುಪಿಯ ಶಿರ್ವ ನಿವಾಸಿ ಸದ್ಯ ಪಂಪ್ ವೆಲ್ ನಲ್ಲಿ ವಾಸವಿದ್ದ ಜೈಸನ್ ಮೆನೆಜಸ್ (26) ಬಂಧಿತರು.

ಆರೋಪಿಗಳು  ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಿನಾಂಕ: 22-03-2026 ರಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿ ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರುಗಳ ವಶದಿಂದ ರೂ.2,50,000/- ಮೌಲ್ಯದ 26 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ನಗದು ಹಣ – 37,000/- ಮೊಬೈಲ್ ಫೋನ್-5, ತೂಕಮಾಪನ, KA-19-AC-2245ನೇ ನಂಬ್ರದ ಆಟೋ ರಿಕ್ಷಾ,  ಸಹಿತ ಒಟ್ಟು ರೂ. 4,37,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಹೈದರ್ @ ಹೈದರ್ ಆಲಿ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರರಣ ಹಾಗೂ 2024ನೇ ವರ್ಷದಲ್ಲಿ ಮಾದಕವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿದ್ದು, ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

- Advertisement -

Latest News

error: Content is protected !!