Friday, June 5, 2026
Homeಕರಾವಳಿಉಡುಪಿಕಾರ್ಕಳ: ಹಾವು ರಕ್ಷಿಸಿ ಕಾಡಿಗೆ ಬಿಡಲು ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿ, ಯುವಕ ಸಾವು

ಕಾರ್ಕಳ: ಹಾವು ರಕ್ಷಿಸಿ ಕಾಡಿಗೆ ಬಿಡಲು ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿ, ಯುವಕ ಸಾವು

- Advertisement -
- Advertisement -

ಕಾರ್ಕಳ: ಹಾವು ರಕ್ಷಿಸಿ ಕಾಡಿಗೆ ಬಿಡಲು ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಮಾಳ ಮುಳ್ಳೂರು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ನವೀನ್ ಬಜಗೋಳಿ ಮೃತ ಯುವಕ. ಘಟನೆ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

 ನವೀನ್ ಅವರು ವೃತ್ತಿಯಿಂದ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಜೊತೆಗೆ ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡುವ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ಇಂದು ಬೆಳಿಗ್ಗೆ ಹಾವು ಹಿಡಿದು ಅದನ್ನು ಕಾಡಿನಲ್ಲಿ ಬಿಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ನವೀನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟರ್‌ನಲ್ಲಿದ್ದ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!