Wednesday, June 3, 2026
Homeಉತ್ತರ ಕನ್ನಡಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಅಪಘಾತಕ್ಕೆ ಬಲಿ

ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಅಪಘಾತಕ್ಕೆ ಬಲಿ

- Advertisement -
- Advertisement -

ಉತ್ತರಕನ್ನಡ: ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್(28) ಅಪಘಾತಕ್ಕೆ ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾವತೀಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ಗ್ರಾಮದ ನಿವಾಸಿಯಾದ ಬಾವತೀಶ್, ಮಂಗಳವಾರ ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಅವರ ಬೈಕ್ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ದ್ವಿಚಕ್ರ ವಾಹನಕ್ಕೆ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾವತೀಶ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಮೂಲಕ ಹಳ್ಳಿಯ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದ ಬಾವತೀಶ್, ತಮ್ಮ ವಿಭಿನ್ನ ಮ್ಯಾನರಿಸಂನಿಂದಲೇ ಅಭಿಮಾನಿಗಳ ನೆಚ್ಚಿನ ಸ್ಪರ್ಧಿಯಾಗಿದ್ದರು. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!