Thursday, June 4, 2026
Homeಕರಾವಳಿಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಮಾಸಿಕ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಮಾಸಿಕ ಸಭೆ

- Advertisement -
- Advertisement -

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಮಾಸಿಕ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು.

ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2026ರ ಫೆಬ್ರವರಿ ತಿಂಗಳಲ್ಲಿ 27156 ಕುಟುಂಬಗಳಿಗೆ 1,35,93,806/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2026ರ ಫೆಬ್ರವರಿ ತಿಂಗಳಲ್ಲಿ 44893 ಕುಟುಂಬಗಳಿಗೆ 2,66,81,397/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 116,81,92,414/- ರೂ ಸಹಾಯಧನ ದೊರೆತಿರುವುದಾಗಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕ್ಲೆಮೆಂಟ್ ಬಿ ಬ್ರಾಗ್ಸ್ ರವರು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 59044 ಫಲಾನುಭವಿಗಳಿದ್ದು, ಆಗಸ್ಟ್-2023 ರಿಂದ ಅಕ್ಟೋಬರ್-2025ರವರೆಗೆ 282,15,90,000/-ರೂ ಸಹಾಯಧನ ದೊರೆತಿರುವುದಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಇವರು ಸಭೆಗೆ ಮಾಹಿತಿ ನೀಡಿದರು.

ಅನ್ನ ಭಾಗ್ಯ ಯೋಜನೆಯಡಿ ಸರ್ಕಾರದ ಆದೇಶದಂತೆ ಸಮೀಕ್ಷೆ ನಡೆಸಲಾಗಿದ್ದು, 764 ಪಡಿತರ ಚೀಟಿಗಳನ್ನು ಎ.ಪಿ.ಎಲ್ ಆಗಿ ಪರಿವರ್ತಿಸಲಾಗಿರುತ್ತದೆ. 1556 ಪಡಿತರ ಚೀಟಿಗಳನ್ನು ಬಿ.ಪಿ.ಎಲ್ ಆಗಿ ಮುಂದುವರಿಸಲಾಗಿದೆ.  ಜುಲೈ-2023 ರಿಂದ ಜನವರಿ-2025ರವರೆಗೆ ಡಿಬಿಟಿ ಮುಖಾಂತರ 45613 ಪಡಿತರ ಚೀಟಿದಾರರಿಗೆ ಪ್ರತೀ ಕೆ.ಜಿ.ಗೆ ರೂಪಾಯಿ 34.00 ರಂತೆ 55,49,55,540.00ರೂಗಳ ಅನುದಾನವು ತಾಲೂಕಿನ ಪಡಿತರ ಚೀಟಿದಾರರಿಗೆ ದೊರೆತಿರುವುದಾಗಿ ಆಹಾರ ನಿರೀಕ್ಷಕರಾದ ವಿಶ್ವ ಕೆ ಇವರು ಸಭೆಗೆ ವಿವರ ನೀಡಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 7392  ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 941 ಅಭ್ಯರ್ಥಿಗಳಿಗೆ 2025ರ ನವೆಂಬರ್ ತಿಂಗಳಲ್ಲಿ 13,89,000ರೂ.ಗಳನ್ನು ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಆಗಸ್ಟ್-2023 ರಿಂದ 2025ರ ನವೆಂಬರ್ ತಿಂಗಳವರೆಗೆ 2,70,22,500.00 ರೂ.ಗಳನ್ನು ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಶ್ರೀಮತಿ ಮಂಜೂಷರವರು ತಿಳಿಸಿದರು.     

ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2026ರ ಫೆಬ್ರವರಿ ತಿಂಗಳಲ್ಲಿ 670490 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023 ರಿಂದ ಈವರೆಗೆ ರೂ.97,75,22,536/- ಬಿಡುಗಡೆಯಾಗಿರುವುದಾಗಿ ಧರ್ಮಸ್ಥಳ ಘಟಕದ ಮೇಲ್ವಿಚಾಲಕರಾದ ರೋಶನ್ ಇವರು ಸಭೆಗೆ ಮಾಹಿತಿ ನೀಡಿದರು.

ಸುಲ್ಕೇರಿ ಗ್ರಾಮದ ಮಾಳಿಗೆ ಎಂಬಲ್ಲಿರುವ ಎಲ್ಲಾ 11 ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಕಾಮಗಾರಿ ಪೂರ್ಣಗೊಂಡಿರುತ್ತದೆ. ಬೆಳ್ತಂಗಡಿ ಉಪವಿಭಾಗದ 60 ಗ್ರಾಮಗಳಿಗೆ 298 ಹೊಸ ವಿದ್ಯುತ್ ಪರಿವರ್ತಕ ಮಂಜೂರಾಗಿದ್ದು, 298 ಹೆಚ್ಚುವರಿ ಪರಿವರ್ತಕಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಮಳೆಗಾಲಕ್ಕಿಂತ ಮೊದಲು ಮರಗಳ ರೆಂಬೆಗಳನ್ನು ತೆರವುಗೊಳಿಸುವ ಕಾರ್ಯವು ಏಪ್ರಿಲ್ 01 ರಿಂದ ಆರಂಭವಾಗಲಿದ್ದು, ಹೆಚ್ಚುವರಿ ವಾಹನ ಹಾಗೂ ಸಿಬ್ಬಂದಿ ಮಂಜೂರಾತಿಯಾಗಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ  ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಮೆರಿಟಾ ಪಿಂಟೋ, ವೀರಪ್ಪ ಮೊಯ್ಲಿ, ವಾಸುದೇವ ರಾವ್, ವಿಜಯಗೌಡ ಬೆಳಾಲು, ಶರೀಫ್ ಸಬರಬೈಲ್, ಕೆ.ನೇಮಿರಾಜ್ ಕಿಲ್ಲೂರು,  ಶ್ರೀಮತಿ ವಂದನಾ, ಸತೀಶ್ ಹೆಗ್ಡೆ, ಕೇಶವ ನಾಯ್ಕ್  ಹಾಗೂ ನೋಡೆಲ್ ಅಧಿಕಾರಿಯಾದ ಹೆರಾಲ್ಡ್ ಸ್ವಿಕ್ವೇರಾ ಇವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!